ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bangaloru): ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ(MUDA) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಮೈಸೂರಿನ ಆರ್ ಟಿಐ(RTI) ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಗುರುವಾರ ಕೇಸ್ ದಾಖಲಿಸಿದ್ದಾರೆ.
ದೂರುದಾರರ ಪರವಾಗಿ ಹೈಕೋರ್ಟ್(High Court) ವಕೀಲೆ ಲಕ್ಷ್ಮಿ ಅಯ್ಯಂಗಾರ್ ಅವರು ದೂರು ದಾಖಲಿಸಿದ್ದಾರೆ. ಹೈಕೋರ್ಟ್ ವಕೀಲ ವಸಂತ್ ಕುಮಾರ್ ವಕಾಲತ್ತು ವಹಿಸಿದ್ದಾರೆ. ದೂರು ಪಡೆದಿರುವ ನ್ಯಾಯಾಧೀಶರಾದ ಗಜಾನನ್ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಕಳಿಸಿದ್ದಾರೆ. ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.