ಪ್ರಜಾಸ್ತ್ರ ಸುದ್ದಿ
ಹರಿಹರ(Harihara): ಬಾಲಕನ ಮೇಲೆ ದೌರ್ಜನ್ಯವೆಸಗಿದ್ದಾರೆ ಅನ್ನೋ ಆರೋಪದ ಮೇಲೆ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ 0 ಎಫ್ಐಆರ್ ದಾಖಲಾಗಿತ್ತು. ಈಗ ಅದು ಹರಿಹರ ಗ್ರಾಮೀಣ ಠಾಣೆಗೆ ವರ್ಗಾವಣೆಗೊಂಡಿದ್ದು ತನಿಖೆ ನಡೆಯುತ್ತಿದೆ.
ಹರಿಹರದ ವೀರಶೈವ ಲಿಂಗಾಯ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದಾರಂತೆ. ಬಾಲಕನ ತಾಯಿ ಈ ಬಗ್ಗೆ ದೂರು ನೀಡಿದ್ದು, ನನ್ನ ಮಗನ ಕೈಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿದ್ದಾರೆ. ಸಂತ್ರಸ್ತ ಬಾಲಕನ ಹೇಳಿಕೆ ಪಡೆಯುತ್ತೇವೆ ಎಂದು ಎಸ್ಪಿ ಡಾ.ಎಚ್.ಟಿ ಶೇಖರ್ ಹೇಳಿದ್ದಾರೆ.
ಹರಿಹರದ ವೀರಶೈವ ಲಿಂಗಾಯ ಪಂಚಮಸಾಲಿ ಗುರುಪೀಠ ಟ್ರಸ್ಟ್ ಇತ್ತೀಚೆಗೆ ಸ್ವಾಮೀಜಿಯನ್ನು ಪದಚ್ಯುತಗೊಳಿಸಿದೆ. ನಂತರ ಸ್ವಾಮೀಜಿ ಮಠದಲ್ಲಿ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಾರೆ ಅನ್ನೋ ಆರೋಪ ಕೇಳಿ ಬಂದಿತು. ಹೀಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಸೇರಿ ಇತರರ ಹೇಳಿಕೆ ದಾಖಲಿಸಿಕೊಂಡಿತ್ತು.




