ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುತ್ತಿಗೆದಾರನಿಗೆ ಜೀವ(Life Threatening) ಬೆದರಿಕೆ, ಜಾತಿ ನಿಂದನೆ ಪ್ರಕರಣ ಸಂಬಂಧ ಎರಡು ದೂರಿನ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮಾಜಿ ಸಚಿವ, ಶಾಸಕ ಮುನಿರತ್ನ ವಿರುದ್ಧ ಈಗ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮಹಿಳೆಯೊಬ್ಬರು ಬುಧವಾರ ರಾತ್ರಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ರೆಸಾರ್ಟ್ ವೊಂದರಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಬಿಜೆಪಿಯಲ್ಲಿ(BJP) ಸಕ್ರಿಯವಾಗಿ ತೊಡಗಿಸಿಕೊಂಡಿರುವೆ. ಜೊತೆಗೆ ಸಮಾಜ ಸೇವೆಯೂ ಮಾಡುತ್ತಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ಒಮ್ಮೆ ಫೋನ್ ಮಾಡಿ ನಗ್ನವಾಗಿ ಇರುವಂತೆ ಒತ್ತಾಯಿಸಿದ್ದರು. ಇದನ್ನು ನಿರಾಕರಿಸಿದ್ದೆ. ಒಂದು ದಿನ ಸ್ಥಳವೊಂದಕ್ಕೆ ಕರೆದಿದ್ದರು. ಅಲ್ಲಿಗೆ ಹೋದರೆ ತಬ್ಬಿಕೊಳ್ಳಲು ಬಂದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ರಾಜಕೀಯವಾಗಿ ಬೆಳೆಯಬೇಕಾದರೆ ಇದೆಲ್ಲ ಕಾಮನ್ ಎಂದು ಹೇಳಿ(Rape) ಅತ್ಯಾಚಾರವೆಸಗಿದ್ದಾರೆ. 2020ರಿಂದ 2022ರ ತನಕ ಅತ್ಯಾಚಾರವೆಸಗಿ ಹನಿಟ್ರ್ಯಾಪ್ ಗೂ ಬಳಸಿಕೊಂಡಿದ್ದರು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಿಸಿಟಿವಿಯಲ್ಲಿರುವ ವಿಡಿಯೋ ರೆಕಾರ್ಡ್ ಮಾಡಿರುವುದನ್ನು ಎಡಿಟ್ ಮಾಡಿ ಹಂಚಲಾಗುವುದು ಎಂದು ಬೆದರಿಕೆ ಹಾಕಿದ್ದರು ಅಂತಾ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.