Ad imageAd image

ಶಾಲಾ, ಕಾಲೇಜುಗಳಲ್ಲಿ ಖಾಲಿಯಿರುವ 15 ಸಾವಿರ ಹುದ್ದೆಗಳ ಭರ್ತಿ

Nagesh Talawar
ಶಾಲಾ, ಕಾಲೇಜುಗಳಲ್ಲಿ ಖಾಲಿಯಿರುವ 15 ಸಾವಿರ ಹುದ್ದೆಗಳ ಭರ್ತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಾಲಾ, ಕಾಲೇಜು ಹಾಗೂ ಉನ್ನತ ಶಿಕ್ಷಣ ವಲಯಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. 2026-27ನೇ ಸಾಲಿನಲ್ಲಿ ಶಾಲಾ, ಕಾಲೇಜುಗಳಲ್ಲಿ ಖಾಲಿಯಿರುವ 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.

204 ಬಿಆರ್ ಸಿ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಓರ್ವ ಅರ್ಹ ಮಾನಸಿಕ ಸಲಹೆಗಾರರನ್ನು ನೇಮಿಸಲಾಗುವುದು. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೆ ತರಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ಹೆಚ್ಚಿಸಲು ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜಿಸಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ 2000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಶೇಕಡ 50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ಓದುವ 25 ಸರ್ಕಾರಿ ಪದವಿ ಕಾಲೇಜು, 3 ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ 1 ಕೋಟಿಯಂತೆ 31 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article