Ad imageAd image

ಬೆಂಗಳೂರು: ಗಾಯಕ ಸೋನು ನಿಗಮ್ ವಿರುದ್ಧ ಎಫ್ಐಆರ್

Nagesh Talawar
ಬೆಂಗಳೂರು: ಗಾಯಕ ಸೋನು ನಿಗಮ್ ವಿರುದ್ಧ ಎಫ್ಐಆರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕನ್ನಡ ಹಾಡು ಹಾಡಿ ಎಂದು ಹೇಳಿದ್ದಕ್ಕೆ ಇದೇ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದಾಳಿ ನಡೆದಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿರುವ ಗಾಯಕ ಸೋನು ನಿಗಮ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಸದಸ್ಯರು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ ಧರ್ಮರಾಜ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 25, 26ರಂದು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಈ ವೇಳೆ ಕನ್ನಡ ಎಂದು ವಿದ್ಯಾರ್ಥಿಯೊಬ್ಬ ಒತ್ತಾಯಿಸಿದ್ದು, ಇದನ್ನು ಪಹಲ್ಗಾಮ್ ದಾಳಿಗೆ ತಳಕು ಹಾಕಿದ್ದಾರೆ. ಇದರಿಂದಾಗಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ಮುಂದೆ ಸೋನು ನಿಗಮ್ ಕನ್ನಡದಲ್ಲಿ ಹಾಡಬಾರದು. ಕರ್ನಾಟಕಕ್ಕೆ ಬರಬಾರದು ಎಂದು ಕಿಡಿ ಕಾರುತ್ತಿದ್ದಾರೆ.

WhatsApp Group Join Now
Telegram Group Join Now
Share This Article