ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಎಸ್ಪಿ ಉಮಾ ಪ್ರಶಾಂತ್ ಅವರನ್ನು ಪೊಮೆರಿಯನ್ ನಾಯಿಗೆ ಹೋಲಿಸಿ ಮಾತನಾಡಿರುವ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಿ.ಪಿ ಹರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಟಿಜಿ ನಗರ ಪೊಲೀಸ್ ಠಾಣೆಯಲ್ಲಿ ಸ್ವತಃ ಎಸ್ಪಿ ಉಮಾ ಪ್ರಶಾಂತ್ ದೂರು ದಾಖಲಿಸಿದ್ದಾರೆ. ಈ ಮೂಲಕ ಶಾಸಕ ಹಾಗೂ ಅಧಿಕಾರ ನಡುವೆ ಕಾನೂನು ಸಮರ ಶುರುವಾಗಿದೆ.
ಸೆಪ್ಟೆಂಬರ್ 2ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ.ಪಿ ಹರೀಶ್ ಅವರು, ಎಸ್ಪಿ ಉಮಾ ಪ್ರಶಾಂತ್, ಶಾಮನೂರು ಮನೆಯ ಪೊಮೆರಿಯನ್ ನಾಯಿ ತರ ನಡೆದುಕೊಳ್ಳುತ್ತಾರೆ ಎಂದು ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಭಾರತೀಯ ದಂಡಸಂಹಿತೆಯ ವಿವಿಧ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.