ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಆನಂದ ಗುರೂಜಿ ಎಂಬುವರಿಗೆ ನಿಮ್ಮ ಸಿಡಿ ಇದೆ ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖಾಸಗಿ ವಾಹಿನಿಯ ಮಾಜಿ ನಿರೂಪಕಿ ದಿವ್ಯ ವಸಂತ ಹಾಗೂ ಸಹಚರ ಕೃಷ್ಣಮೂರ್ತಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರೂಜಿ ದೂರು ನೀಡಿದ್ದು, ಕೃಷ್ಣಮೂರ್ತಿ ಎ1 ಹಾಗೂ ದಿವ್ಯ ವಸಂತ ಎ2 ಆಗಿದ್ದಾರೆ.
ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರೂ ನಿಮ್ಮ ವಿಡಿಯೋ ಇದೆ ಎಂದು ಹೇಳಿ ನಿತ್ಯ ಕಿರುಕುಳ ನೀಡುತ್ತಿದ್ದಾರಂತೆ. ಅಲ್ಲದೆ ತಮ್ಮ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ಬೈದಿದ್ದಾರೆ. ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದಿವ್ಯ ವಸಂತ್ ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಳು. ಖಾಸಗಿ ವಾಹಿನಿಯಲ್ಲಿ ನಿರೂಪಕಿಯಾಗಿದ್ದ ವೇಳೆ ಬೇರೆಯವರ ಬಗ್ಗೆ ಬಾಯಿಗೆ ಬಂದಂತೆ ಬೈಯುತ್ತಿದ್ದಳು. ಈಗ ಹಣಕ್ಕಾಗಿ ಅಡ್ಡ ದಾರಿ ಹಿಡಿದಿದ್ದು, ಮತ್ತೊಂದು ಪ್ರಕರಣ ದಾಖಲಾಗಿದೆ.