Ad imageAd image

ಹುಡುಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ವಕ್ಫ್ ಆಸ್ತಿ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ.

Nagesh Talawar
ಹುಡುಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ(Shivamogga): ವಕ್ಫ್ ಆಸ್ತಿ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರನ್ನು, ಮುಸ್ಲಿಂರನ್ನು ಹಾದಿಯಲ್ಲಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂರಿಗೆ ಶೇಕಡ 4ರಷ್ಟು ಮೀಸಲಾತಿ ಘೋಷಿಸಲು ಯತ್ನಿಸಿದ್ದಾರೆ. ಹಿಂದೂಸ್ಥಾನ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಕೃಷಿ ಭೂಮಿ, ದೇವಸ್ಥಾನ, ಮಠ, ಶಾಲೆ ಕಾಲೇಜುಗಳನ್ನು ಬಿಟ್ಟಿಲ್ಲ. ಎಲ್ಲವನ್ನೂ ವಕ್ಫ್ ಆಸ್ತಿಯಾಗಿ ಮಾಡುತ್ತಿದ್ದಾರೆ. ಮುಸ್ಲಿಂ ಮುಖಂಡರೊಬ್ಬರು ಅಂಬೇಡ್ಕರ್ ಹೆಸರನ್ನು ಬಳಸುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಗಲಭೆಗಳು ಏಳುತ್ತವೆ. ಕಾಂಗ್ರೆಸ್ ನಾಯಕರನ್ನು, ಮುಸ್ಲಿಂರನ್ನು ಬೇಟೆಯಾಡಿ ಕೊಲ್ಲುವ ಕಾಲ ಬರಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಯಿತು. ಕಾಂಗ್ರೆಸ್ ಪ್ರತಿಭಟನೆ ಮಾಡಿ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿತು.

WhatsApp Group Join Now
Telegram Group Join Now
Share This Article