ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚುನಾವಣಾ(Electoral Bond) ಬಾಂಡ್ ಹೆಸರಿನ ಮೂಲಕ ಉದ್ಯಮಿಗಳಿಂದ ಕೋಟ್ಯಾಂತರ ರೂಪಾಯಿ ಹಣ ಸುಲಿಗೆ ಮಾಡಲಾಗಿದೆ ಎನ್ನುವ ಆರೋಪ ಸಂಬಂಧ ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಜೆ.ಪಿ ನಡ್ಡಾ, ಇಡಿ(ED) ಅಧಿಕಾರಿಗಳು ಹಾಗೂ ಬಿಜೆಪಿಯ ಕೆಲ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರದಲ್ಲಿ ಎಫ್ಐಆರ್ ದಾಖಲಾಗಿದೆ. ಆದರ್ಶ ಆರ್.ಐಯ್ಯರ್ ಅವರ ದೂರನ್ನಾಧರಿಸಿ ಕೋರ್ಟ್ ಎಫ್ಐಆರ್ ದಾಖಲಿಸಲು ಶುಕ್ರವಾರ ಆದೇಶಿಸಿತ್ತು. ಎಫ್ಐಆರ್(FIR) ನಲ್ಲಿ ಕಾನೂನು ಬಾಹಿರವಾಗಿ ಬರೋಬ್ಬರಿ 8 ಸಾವಿರ ಕೋಟಿಗೂ ಹೆಚ್ಚು ಹಣ ಸುಲಿಗೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಇಡಿ ಅಧಿಕಾರಿಗಳ ಮೂಲಕ ನಿರ್ಮಲಾ ಸೀತಾರಾಮನ್ ಅವರು ಕಾರ್ಪೂರೇಟ್ ಕಂಪನಿಗಳ ಸಿಇಒಗಳ ಮೇಲೆ ದಾಳಿ ಮಾಡಿಸಿದ್ದಾರೆ. ಇದರಿಂದ ಕಂಗಾಲದ ಅವರು ಬಹುಕೋಟಿ ಚುನಾವಣಾ ಬಾಂಡ್ ಗಳನ್ನು ಖರೀದಿಸಿದ್ದಾರೆ. ನಂತರ ಅದನ್ನು ರಾಷ್ಟ್ರೀಯ ಹಾಗೂ ರಾಜ್ಯ ಬಿಜೆಪಿಗೆ ದೇಣಿಯಾಗಿ ನೀಡಿವೆ. ಇದನ್ನು ಬಿಜೆಪಿ ನಗದಾಗಿ ಪರಿವರ್ತಿಸಿಕೊಂಡು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಾರ್ಚ್ 30, 2024ರಂದು ತಿಲಕನಗರ ಪೊಲೀಸ್ ಠಾಣೆಯಲ್ಲಿ, ಏಪ್ರಿಲ್ 2, 2024ರಂದು ಬೆಂಗಳೂರು ದಕ್ಷಿಣ ಡಿಸಿಪಿಗೆ ದೂರು ಸಲ್ಲಿಸಲಾಗಿದೆ. ಆದರೆ, ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಕೋರ್ಟ್ ನಲ್ಲಿ ಖಾಸಗಿ ದೂರು ಸಲ್ಲಿಸಲಾಗಿತ್ತು.