ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಅಪ್ರಾಪ್ತೆಯನ್ನು ಮದುವೆಯಾಗಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಭೀಮಶಿ ಕಾಲಿಮಣಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಭೀಮಶಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನವೆಂಬರ್ 5, 2023ರಲ್ಲಿ ಮದುವೆಯಾಗಿದೆ. ಆಗ ಬಾಲಕಿಗೆ 15 ವರ್ಷ ಆಗಿತ್ತು ಎಂದು ಯಮಕನಮರಡಿ ಠಾಣೆ ಪೊಲೀಸರು ಭಾನುವಾರ ದಾಖಲಿಸಿರುವ ಎಫ್ಐಆರ್ ನಲ್ಲಿ ತಿಳಿಸಲಾಗಿದೆ. ಇಷ್ಟು ದಿನ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. ಮಾಹಿತಿ ತಿಳಿದು ಗ್ರಾಮಕ್ಕೆ ಹಲವು ಬಾರಿ ಅಧಿಕಾರಿಗಳು ಭೇಟಿ ನೀಡಿದ್ದರು. ನಕಲಿ ದಾಖಲೆ ಸೃಷ್ಟಿಸಿ ಪತ್ನಿ ಪ್ರಾಪ್ತಳು ಎಂದು ಹೇಳಿದ್ದ. ಸಾಮಾಜಿಕ ಜಾಲತಾಣದಲ್ಲಿ ತಾನೇ ಪ್ರಚಾರ ಮಾಡಿದ್ದ. ಬಾಲಕಿ ಶಾಲಾ ದಾಖಲಾತಿ, ಜನ್ಮ ಪ್ರಮಾಣಪತ್ರ ಪರಿಶೀಲನೆ ನಡೆಸಿದಾಗ ಅಪ್ರಾಪ್ತಳು ಎಂದು ತಿಳಿದು ಬಂದಿದೆ.