ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆದರಿಕೆ, ಸುಳ್ಳು ಆರೋಪದಡಿಯಲ್ಲಿ ಲೋಕಾಯುಕ್ತ ಎಸ್ಐಟಿ(SIT) ವಿಭಾಗದ ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಮೇರೆಗೆ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಇವರ ಪುತ್ರ ನಿಖಿಲ್, ಇವರ ಆಪ್ತ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿದೆ. 42ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಮಾಧ್ಯಮಗೋಷ್ಠಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿಯವರು, ನನ್ನನ್ನು ಕರ್ನಾಟಕ ರಾಜ್ಯ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳಿಸುವ ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಇದೆಲ್ಲವೂ ದುರುದ್ದೇಶದಿಂದ ಮಾಡಿರುವ ಆರೋಪವೆಂದು ಚಂದ್ರಶೇಖರ್ ದೂರು ಸಲ್ಲಿಸಿದ್ದಾರೆ. ಹೀಗಾಗಿ ಹೆಚ್ಡಿಕೆ(HDK), ನಿಖಿಲ್(Nikhil Kumaraswamy), ಸುರೇಶ್ ಬಾಬು ವಿರುದ್ಧ ಎಫ್ಐಆರ್ ಆಗಿದೆ.