ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಜಮೀನು ಒಡೆತನದ ವಿಚಾರವಾಗಿ ಕನ್ನಡದ ದಿಯಾ ಸಿನಿಮಾ ಖ್ಯಾತಿಯ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿನಾಪ್ಸೆ ಕನ್ ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ನ ಕೃಷ್ಣ ಚೈತನ್ಯ, ಸಚಿನ್ ನಾರಾಯಣ್ ಹಾಗೂ ಇತರರು ಕಸವನಹಳ್ಳಿ ಗ್ರಾಮದ ಸರ್ವೇ ನಂಬರ್ 52ರಲ್ಲಿ 3 ಎಕರೆ 35 ಗುಂಟೆ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಬೆಳಂದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಮಮೂರ್ತಿ ಎಂಬುವರು ಇದು ನಮ್ಮ ಜಮೀನು ಆಗಿದೆ. ಆದರೆ, ಕೃಷ್ಣ ಚೈತನ್ಯ ಹಾಗೂ ಇತರರು ನಮಗೆ ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಇದಕ್ಕೆ ಪ್ರತಿದೂರು ದಾಖಲಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.