ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರೋಡ್ ರೇಜ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೈಕ್ ಸವಾರ ವಿಕಾಸ್ ನೀಡಿದ ದೂರಿನ ಮೇರೆಗೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೈಕ್ ಸವಾರ ಹಾಗೂ ವಿಂಗ್ ಕಮಾಂಡರ್ ನಡುವಿನ ಜಗಳ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿಲಾದಿತ್ಯ ಬೋಸ್ ಬೈಕ್ ಸವಾರನನ್ನು ಲಾಕ್ ಮಾಡಿ ಕೆಳಗೆ ಬೀಳಿಸಿ ಹಲ್ಲೆ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಮೊದಲು ಶಿಲಾದಿತ್ಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇವರ ಪತ್ನಿ ಮಧುಮಿತಾ ದತ್ತ ಸಾಫ್ಟ್ ವೇರ್ ಎಂಜಿನಿಯರ್ ವಿಕಾಸ್ ಮೇಲೆ ದೂರು ದಾಖಲಿಸಿದ್ದರು. ಸೋಮವಾರ ಸಂಜೆ ಇವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಇದಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ವಿಕಾಸ್ ಮೇಲೆ ಶಿಲಾದಿತ್ಯ ಹಲ್ಲೆ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಸಿಕ್ಕಿದೆ. ಹೀಗಾಗಿ ಇವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಬಿಎನ್ಎಸ್ ಕಾಯ್ದೆ 109, 115(2), 304, 324 ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.