ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijaypura): ಪ್ರವಾದಿ ಮಹಮ್ಮದ್ ಪೈಂಗರ್ ಬಾಳ್ ಸಾಬ್ ಠಾಕ್ರೆ ಮನೆಯಲ್ಲಿ ಹುಟ್ಟಿದ್ದಾನೆ ಎಂದು ಆಧರ ರಹಿತಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಗೋಳಗುಮ್ಮಟ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬುವರು ದೂರು ದಾಖಲಿಸಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವುದು, ಸಮಾಜದಲ್ಲಿ ಶಾಂತಿಗೆ ಭಂಗ ತರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ರಾಮ ನವಮಿ ಪ್ರಯುಕ್ತ ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ಏಪ್ರಿಲ್ 7ರಂದು ನಡೆದ ಕಾರ್ಯಕ್ರಮದಲ್ಲಿ, ಇಸ್ಲಾಂ ಧರ್ಮ ಹಾಗೂ ಪ್ರವಾದಿ ಕುರಿತು ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.