ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಜನವರಿ 1ರಂದು ನಡೆದಿದ್ದ ಘರ್ಷಣೆ, ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಜನವರಿ 17ರಂದು ಬೃಹತ್ ಸಮಾವೇಶ ನಡೆಸಲಾಯಿತು. ಈ ವೇಳೆ ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ಬಾಲಕಿಯೊಬ್ಬರ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣವನ್ನು ಬಹಿರಂಗ ಪಡಿಸಿದ್ದಾರೆ. ಮಾತಿನ ಭರದಲ್ಲಿ ಸಂತ್ರಸ್ತೆಯ ಹೆಸರು, ಶಾಲೆ, ಜಾತಿ, ಸೇರಿದಂತೆ ಪ್ರತಿಯೊಂದು ಮಾಹಿತಿ ಬಹಿರಂಗ ಪಡೆಸಿದ್ದಾರೆ. ಹೀಗಾಗಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಾಸಕ ಭರತ್ ರೆಡ್ಡಿ ಯುವಕರನ್ನು ಯಾವ ರೀತಿ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ ನಾಲ್ಕೈದು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ನಗರದ ಶಾಲೆಯೊಂದರ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿದರು. ಅಲ್ಲದೆ ಆ ಸಂತ್ರಸ್ತೆಯ ಪ್ರತಿಯೊಂದು ಮಾಹಿತಿ ನೀಡಿದರು. ಹೀಗಾಗಿ ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ನೀಡಿದ ದೂರಿನ ಅನ್ವಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.




