Ad imageAd image

ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ, ನಾಲ್ವರ ಸಾವು

Nagesh Talawar
ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ, ನಾಲ್ವರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮುಂಬೈ(Mumbai): ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್ ಶಿಪ್ ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಟ್ಟಡದ 10ನೇ ಮಹಡಿಯಲ್ಲಿ ಬೆಂಕಿ ಅನಾಹುತವಾಗಿದೆ. ಅಲ್ಲದೆ ಇದು 11 ಹಾಗೂ 12ನೇ ಮಹಡಿಗೂ ವ್ಯಾಪಿಸಿದೆ.

ಈ ಬೆಂಕಿ ಅನಾಹುತದಲ್ಲಿ 6 ವರ್ಷದ ಬಾಲಕಿ, ಇಬ್ಬರು ಮಹಿಳೆಯರು ಸೇರಿದಂತೆ 4 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗಿನಜಾವ 4 ಗಂಟೆಗೆ ಸುಮಾರಿಗೆ ಬೆಂಕಿ ನಂದಿಸುವ ಕೆಲಸ ಮುಗಿದಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article