ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಗೋಮಾಂಸ ಸಾಗಿಸುತ್ತಿದ್ದ ಟ್ರಕ್ ಗೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ವಾಹನದಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಶಂಕಿಸಿ ಕೆಲವರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ರಾಯಬಾಗ ತಾಲೂಕಿನ ಕುಡಚಿಯಿಂದ ಹೈದಾರಾಬಾದ್ ಗೆ ವಾಹನ ತೆರಳುತ್ತಿತ್ತು. ವಾಹನ ಸಂಪೂರ್ಣ ಕರಕಲಾಗಿದೆ. ಈ ಬಗ್ಗೆ ಎಸ್ಪಿ ಭೀಮಾಶಂಕರ ಗುಳೇದ ಮಾತನಾಡಿದ್ದು, ಗೋಹತ್ಯೆ ಕಾಯ್ದೆ ಹಾಗೂ ಪ್ರಾಣಿಹಿಂಸೆ ಕಾಯ್ದೆ ಅಡಿಯಲ್ಲಿ ಮೂವರು ಬಂಧಿಸಲಾಗಿದೆ. ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ಈ ಮೂಲಕ ಘಟನೆ ಸಂಬಂಧ ಎರಡು ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.