ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ನಟೋರಿಯಸ್ ದರೋಡೆಕೋರ ಪಾಲ್ ವೆಂಕಟೇಶ್ವರಾವ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಪಿಎಸ್ಐ ಸೇರಿ ಇಬ್ಬರು ಸಿಬ್ಬದಿ ಗಾಯಗೊಂಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರವಾಡದ ನವಲೂರಿನ ಮನೆಯೊಂದಕ್ಕೆ ನುಗ್ಗಿ ಕಳ್ಳತನ ನಡೆಸುತ್ತಿದ್ದ ಸಂದರ್ಭದಲ್ಲಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೊರಟ್ಟಿದ್ದರು. ಈ ವೇಳೆ ಪೊಲೀಸರ ಮೇಲೆಯೇ ದಾಳಿ ಮಾಡಿ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಆತನ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶ ಮೂಲದ ಈತ ಐದು ರಾಜ್ಯಗಳಿಗೆ ಬೇಕಾಗಿದ್ದ. 80ಕ್ಕೂ ಹೆಚ್ಚು ಕಳ್ಳತನ ಕೃತ್ಯಗಳನ್ನು ನಡೆಸಿದ್ದಾನೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿದ್ದಾರೆ.