ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಗುರುವಾರ ಮುಂಜಾನೆ ಆರ್ ಜೆಡಿ(RJD) ನಾಯಕ ಪಂಕಜ್ ಯಾದವ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಮ್ಮ ಮನೆಯ ಹತ್ತಿರ ವಾಯು ವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಎರಡು ಗುಂಡುಗಳು ತಗುಲಿವೆಯಂತೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆರ್ ಜೆಡಿ ಪ್ರಧಾನ ಕಾರ್ಯದರ್ಶಿಯಾಗಿ ಪಂಕಜ್(Pankaj Yadav) ಯಾದವ್ ಮೇಲೆ ಫೈರಿಂಗ್ ಮಾಡಿದ್ದು ಯಾರು ಅನ್ನೋದು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪಕ್ಷದ ಯುವ ನಾಯಕ ತೇಜಸ್ವಿ ಯಾದವ್ ಘಟನೆಯನ್ನು ಖಂಡಿಸಿದ್ದು, ಪ್ರಧಾನಿ ಮೋದಿ ಹಾಗೂ ಬಿಹಾರ ಸಿಎಂ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.