ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಳೆದ ಜನವರಿ 28ರಂದು ಮಾಜಿ ರೌಡಿ ಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯನ್ನು ರೌಡಿ ಶೀಟರ್ ಗುಬ್ಬಚ್ಚಿ ಸೀನ ಗ್ಯಾಂಗ್ ಹತ್ಯೆ ಮಾಡಿತ್ತು. ಈ ತಂಡವನ್ನು ಬಂಧಿಸಿಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇಂದು ದೊಮ್ಮಸಂದ್ರದ ಬಳಿ ಗುಬ್ಬಚ್ಚಿ ಸೀನ ಅವಿತುಕೊಂಡಿದ್ದ. ಆತನನ್ನು ಪತ್ತೆ ಹಚ್ಚಿ ಬಂಧಿಸಲು ಹೋದಾಗ ಹಲ್ಲೆ ಮಾಡಿ ಎಸ್ಕೇಪ್ ಆಗಲು ನೋಡಿದ್ದಾನೆ. ಆಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಇನ್ಸ್ ಪೆಕ್ಟರ್ ನವೀನ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಹೇಳಿದ್ದಾರೆ. ಆದರೆ, ಸೀನ ಕಾನ್ಸ್ ಟೇಬಲ್ ಇರ್ಫಾನ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ನೋಡಿದ್ದಾನೆ. ಆಗ ಅವನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಆನೇಕಲ್ ತಾಲೂಕಿನ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಹಾಗೂ ಸಿಬ್ಬಂದಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನನ್ನು ಬಂಧಿಸಲು ಹೋದಾಗ ಫೈರಿಂಗ್ ನಡೆದಿದೆ.