Ad imageAd image

ಪ್ಯಾರಿಸ್ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಪದಕ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದೆ. ಏರ್ ಪಿಸ್ತೂಲ್ ವಿಭಾಗದ ಶೂಟರ್ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಮೊದಲ ಪದಕ ತಂದಿದ್ದಾರೆ.

Nagesh Talawar
ಪ್ಯಾರಿಸ್ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಪದಕ
WhatsApp Group Join Now
Telegram Group Join Now

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದೆ. ಏರ್ ಪಿಸ್ತೂಲ್ ವಿಭಾಗದ ಶೂಟರ್ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಮೊದಲ ಪದಕ ತಂದಿದ್ದಾರೆ. ಮಹಿಳಾ ವಿಭಾಗದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಈ ಮೂಲಕ ಶೂಟಿಂಗ್ ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಶೂಟರ್ ಅಭಿನವ್ ಬಿಂದ್ರಾ ಸೇರಿ ಕ್ರೀಡಾಪಟುಗಳು ಶುಭ ಕೋರಿದ್ದು, ನಿಮ್ಮ ಗೆಲುವು ದೇಶಕ್ಕೆ ಗೌರವ, ಹೆಮ್ಮೆ ಮೂಡಿಸಿದೆ. ದೇಶಕ್ಕೆ ಕೀರ್ತಿ ತಂದಿದ್ದೀರಿ ಅಂತಾ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article