ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟವಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಪುರ ತಾಲೂಕಿನ ವಾಡಿ ಠಾಣೆಯ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಿಬ್ಬಂದಿ ಠಾಣೆಯಲ್ಲಿ ಇಸ್ಪೀಟ್ ಆಡಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಐವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಠಾಣೆಯ ಎಎಸ್ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್ ಟೇಬಲ್ ಗಳಾದ ನಾಗರಾಜ, ಸಾಯಿಬಣ್ಣ, ಇಮಾಮ್, ಕಾನ್ಸ್ ಟೇಬಲ್ ನಾಗಭೂಷಣ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ಸಂಬಂಧ ಠಾಣೆಯ ಪಿಎಸ್ಐ ತಿರುಮಲೇಶ್ ಅವರಿಗೂ ನೋಟಿಸ್ ನೀಡಲಾಗಿದೆ.