ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಅರ್ಜೆಂಟೀನಾದ ಫುಟ್ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಅವರು ಭಾರತ ಪ್ರವಾಸದಲ್ಲಿದ್ದಾರೆ. ಶನಿವಾರ ಪಶ್ಚಿಮ ಬಂಗಾಳ, ಹೈದರಾಬಾದ್ ಸೇರಿದಂತೆ ಭಾರತ ಪ್ರಮುಖ ನಗರಗಳಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳಿಗೆ ಖುಷಿ ನೀಡಿದರು. ಅಲ್ಲದೆ ಲೋಕಸಭೆ ವಿಪಕ್ಷ ರಾಹುಲ್ ಗಾಂಧಿ ಸಹ ಯುವ ಫುಟ್ಬಾಲ್ ಆಟಗಾರರೊಂದಿಗೆ ಭೇಟಿಯಾಗಿ ಫೋಟೋಗೆ ಪೋಸ್ ಕೊಟ್ಟರು.
ಇನ್ನು ಭಾನುವಾರ ಮುಂಬೈನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತಂಡೂಲ್ಕರ್, ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲಿದ್ದಾರೆ. ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿನ ಪ್ರಸಿದ್ಧ ಆಟಗಾರರೊಂದಿಗೆ 3.30ಕ್ಕೆ ಪ್ಯಾಡಲ್ ಪಂದ್ಯ ನಡೆಯಲಿದೆ. ಸಂಜೆ 4 ಗಂಟೆಗೆ ಬಾಲಿವುಡ್ ಸ್ಟಾರ್ ಗಳೊಂದಿಗೆ ಸ್ನೇಹಯುತ ಫುಟ್ಬಾಲ್ ಪಂದ್ಯ ನಡೆಯಲಿದೆ. ನಂತರ ಸಂಜೆ 5 ಗಂಟೆಗೆ ವಾಂಖಡೆ ಕ್ರೀಡಾಂಗಣದಲ್ಲಿ ಚಾರಿಟಿ ಫ್ಯಾಶನ್ ಶೋನಲ್ಲಿ ಭಾಗವಹಿಸಲಿದ್ದಾರೆ.




