ಪ್ರಜಾಸ್ತ್ರ ಸುದ್ದಿ
ಕಡೂರು(Kadoru): ಅರಣ್ಯಕ್ಕೆ ಸಂಬಂಧಿಸಿದ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ತಹಶೀಲ್ದಾರ್ ಎಸ್.ಪೂರ್ಣಿಮಾ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಅಮಾನತು ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಎಸೆಗಿರುವ ಆರೋಪದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.
ಸಧ್ಯ ಕಡೂರು ತಹಶೀಲ್ದಾರ್ ಆಗಿರುವ ಎಸ್.ಪೂರ್ಣಿಮಾ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರದ ಅನುಮತಿ ಇಲ್ಲದೆ ಅಕ್ರಮವಾಗಿ ಮಂಜೂರು ಮಾಡಿರುವ ಆರೋಪವಿದೆ. ಹೀಗಾಗಿ ಇವರನ್ನು ಅಮಾನತುಗೊಳಿಸಲಾಗಿದೆ.