ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಸಲಹಾ ಸಮಿತಿಯನ್ನು ರಚಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ 48 ಸದಸ್ಯರು ಇರುವ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯಲ್ಲಿ ಸಮಾಜಸೇವೆ, ಸಾಹಿತ್ಯ, ಸಿನಿಮಾ, ವೈದ್ಯಕೀಯ, ಕೃಷಿ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿದ್ದಾರೆ.
ಇದರಲ್ಲಿ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಪ್ರತಿನಿಧಿಗಳು ಪದನಿಮಿತ್ತ ಸದಸ್ಯರಿರುತ್ತಾರೆ. 69ನೇ ಕನ್ನಡ ರಾಜ್ಯೋತ್ಸವ ಸಂಭ್ರವಾಗಿರುವುದರಿಂದ 69 ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. 5 ಲಕ್ಷ ರೂಪಾಯಿ ನಗದು, 25 ಗ್ರಾಂ ಚಿನ್ನ, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.