Ad imageAd image

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ

Nagesh Talawar
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಢಾಕಾ(Dhaka): ವಸತಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆಯನ್ನು, ಢಾಕಾ ವಿಶೇಷ ನ್ಯಾಯಾಲಯ ವಿಧಿಸಿದೆ. ಇದೆ ಪ್ರಕರಣದಲ್ಲಿ ಇವರ ಸಹೋದರಿ ಶೇಖ್ ರೆಹಾನಾ, ಸಂಬಂಧಿಯಾದ ಬ್ರಿಟನ್ ಸಂಸದೆ ತುಲಿಪ್ ರಿಜ್ವಾನ್ ಸಿದ್ದಿಕ್ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದರ ನಡುವೆ ಹಸೀನಾ ಸೋದರ ಸೊಸೆ ಅಜ್ಮಿನಾ ಸಿದ್ದಿಕ್ ಗೆ ಪ್ರಕರಣವೊಂದರಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸರ್ಕಾರಿ ಅಧಿಕಾರಿಗಳು ಸಹ ಇದರಲ್ಲಿ ಪ್ರಮುಖ ಪಾತ್ರಧಾರಿಗಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ಆಯೋಗ ಮಾರ್ಚ್ 10, 2025ರಂದು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು.

WhatsApp Group Join Now
Telegram Group Join Now
Share This Article