ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ(kolkata): ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ(buddhadeb bhattacharya) ಅವರು ಗುರುವಾರ ಮುಂಜಾನೆ ನಿಧನರಾಗಿದ್ದಾರೆ. 80 ವರ್ಷದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸ್ವಗೃಹದಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
2000ರಿಂದ 2011ರ ವರೆಗೆ ಸುದೀರ್ಘ 11 ವರ್ಷಗಳ ಕಾಲ ಸಿಎಂ ಆಗಿದ್ದರು. ಮುಂದೆ ನಡೆದ ಚುನಾವಣೆಯಲ್ಲಿ ಇವರ ನೇತೃತ್ವದ ಸಿಪಿಐ(ಎಂ) ಪಕ್ಷ(CPIM) ಸೋಲು ಅನುಭವಿಸಿತು. ಮಮತಾ ಬ್ಯಾನರ್ಜಿ ಅವರ ಟಿಎಂಸಿ(TMC) ಗೆಲುವು ದಾಖಲಿಸಿತು. ಇದರೊಂದಿಗೆ 34 ವರ್ಷಗಳ ಕಾಲವಿದ್ದ ಎರಡರಂಗದ ಆಡಳಿತಕ್ಕೆ ತೆರೆ ಬಿದ್ದಿತು.