ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಪಿಎ ಚಂದ್ರು ಎಂಬುವರ ಮಗ ಹೇಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಎಂವಿ 2ನೇ ಹಂತದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಕಳೆದ ರಾತ್ರಿ ನಡೆದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.




