Ad imageAd image

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ವಯೋಸಹಜ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ

Nagesh Talawar
ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ವಯೋಸಹಜ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.  ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಪರಿಣಾಮ ಸುಮಾರು 4 ತಿಂಗಳ ಕಾಲ ಚಿಕಿತ್ಸೆ ಪಡೆದು ಆಗಸ್ಟ್ 28ರಂದು ಮನೆಗೆ ಮರಳಿದ್ದರು.

ಶನಿವಾರ ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುನಿಲ್ ಕಾರಂತ್ ಹಾಗೂ ಡಾ.ಸತ್ಯನಾರಾಯಣ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಸೋಮವಾರ ಮನೆಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. 92 ವರ್ಷದ ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಹಲವು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.

WhatsApp Group Join Now
Telegram Group Join Now
Share This Article