ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (92) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ನಸುಕಿನಜಾವ ನಿಧನರಾಗಿದ್ದಾರೆ. ಬೆಂಗಳೂರು ಐಟಿ ಸಿಟಿ ಎಂದು ಖ್ಯಾತಿ ಪಡೆಯುವುದರ ಹಿಂದೆ ಎಸ್.ಎಂ ಕೃಷ್ಣ ಇದ್ದಾರೆ. ಇವರ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. 1999-2004ರಲ್ಲಿ ಮುಖ್ಯಮಂತ್ರಿ ಆಗಿದ್ದರು. ಕೇಂದ್ರದಲ್ಲಿ 2009-12ರ ತನಕ ವಿದೇಶಾಂಗ ಸಚಿವರಾಗಿದ್ದರು. ಮಹಾರಾಷ್ಟ್ರ ರಾಜ್ಯಪಾಲರಾಗಿಯೂ2004-8ರ ತನಕ ಕೆಲಸ ಮಾಡಿದ್ದಾರೆ. ಕೊನೆಯ ದಿನಗಳಲ್ಲಿ ಕಾಂಗ್ರೆಸ್ ತೊರೆದ ಬಿಜೆಪಿ ಸೇರಿದರು.