ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷಕ್ಕೆ ದೊಡ್ಡ ಆಘಾತವಾಗಿದೆ. ಯಾಕಂದ್ರೆ, ಆಪ್ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾಗೆ ಸೋಲಾಗಿದೆ. ಈ ಮೂಲಕ ಆಪ್ ನಾಯಕರಿಗೆ ಭಾರೀ ಮುಖಭಂಗವಾಗಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಕೇವಲ 3,182 ಮತಗಳಿಂದ ಸೋಲಾಗಿದೆ.
ಇನ್ನು ಆಪ್ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಹ ಸೋಲು ಕಂಡಿದ್ದಾರೆ. ಜಂಗ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರು ಸಹ ಬಿಜೆಪಿಯ ತನ್ವೀಂದ್ರ ಸಿಂಗ್ ವಿರುದ್ಧ ಪರಾಭವಗೊಂಡಿದ್ದಾರೆ. ಕೇವಲ 600 ಮತಗಳ ಅಂತರದಿಂದ ಸೋಲುವ ಮೂಲಕ ಭಾರೀ ನಿರಾಸೆಯಾಗಿದೆ. ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಇಬ್ಬರು ಜೈಲಿಗೆ ಹೋಗಿ ಬಂದಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.