ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ವಯೋಸಹಜ ಅನಾರೋಗ್ಯದಿಂದ ಹಲವು ದಿನಗಳಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್(79) ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೆಹಲಿಯ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಮಲಿಕ್ ಅವರು 1980-89ರ ತನಕ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದರು. 1989ರಿಂದ 91ರ ತನಕ ಜನತಾದಳದಿಂದ ಅಲಿಘಢ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಜಾಟ್ ಸಮುದಾಯಕ್ಕೆ ಸೇರಿದ ಮಲಿಕ್ ಅವರನ್ನು ಬಿಜೆಪಿ 2018ರಲ್ಲಿ ಬಿಹಾರ್ ರಾಜ್ಯಪಾಲರನ್ನಾಗಿ ನೇಮಕ ಮಾಡಿತು. ಮುಂದೆ ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಗೋವಾ, ಮೇಘಾಲಾಯ ವರ್ಗಾಯಿಸಿತ್ತು.
ಸತ್ಯಾಪಾಲ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ 2,200 ಕೋಟಿ ರೂಪಾಯಿ ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಫೈಲ್ ಗಳಿಗೆ ಸಹಿ ಮಾಡಲು 300 ಕೋಟಿ ರೂಪಾಯಿ ಲಂಚ ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತು. ಮಲಿಕ್ ಸೇರಿದಂತೆ ಐವರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತು.