ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಇನ್ನು ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಆಗಸ್ಟ್ 8ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜಾಜಿನಗರ ಹಾಗೂ ಮಹದೇವಪುರದಲ್ಲಿ ಮತಗಳ್ಳತನ ನಡೆಸಲಾಗಿದೆ ಎನ್ನುವ ಆರೋಪವನ್ನು ಮಾಡಿದ್ದಾರೆ. ಇದಕ್ಕೆ ತಮ್ಮ ಬಳಿ ಸಾಕ್ಷಿಯಿದೆ ಎಂದಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಲಿದ್ದಾರೆ.