ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಂಗಾರ ಖರೀದಿಸುವ ನೆಪದಲ್ಲಿ ವ್ಯಾಪಾರಿಯೊಬ್ಬರಿಗೆ ವಂಚನೆ ನಡೆಸಲಾಗಿದೆ ಎನ್ನುವ ಪ್ರಕರಣ ಸಂಬಂಧ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಮಹಿಳೆ ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರು ಹೇಳಿದ್ದರಿಂದ ಅವರಿಗೆ ನೋಟಿಸ್ ನೀಡಲಾಗಿತ್ತು. ಇದೀಗ ಮಾಜಿ ಸಚಿವರು ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಎಂಬುವರನ್ನು ಬಂಧಿಸಿದ್ದರು. ಆಕೆಯ ವಿಚಾರಣೆ ವೇಳೆ ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾಳೆ. ಹೀಗಾಗಿ ಮೂರು ಬಾರಿ ನೋಟಿಸ್ ನೀಡಲಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾಗಿದ್ದಾರೆ. ಎಸಿಪಿ ಗೀತಾ ನೇತೃತ್ವದ ತಂಡ ವಿಚಾರಣೆ ನಡೆಸಿದೆ. ಫೇಸ್ ಬುಕ್ ಮೂಲಕ ಮಹಿಳೆ ಪರಿಚಯವಾಗಿದ್ದಳಂತೆ. ಆಕೆಯಿಂದ ಇದೀಗ ವರ್ತೂರು ಪ್ರಕಾಶ್ ಅವರಿಗೆ ಸಂಕಷ್ಟ ಎದುರಾಗಿದೆ.