ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದೊಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. ಈ ಮೂಲಕ ದೇವೇಗೌಡರ ಕುಟುಂಬಕ್ಕೆ ದೊಡ್ಡ ಶಾಕ್ ಆಗಿದೆ. ಪ್ರಜ್ವಲ್ ರೇವಣ್ಣ ಇನ್ಮುಂದೆ ಜೈಲಿನಲ್ಲಿಯೇ ಮುದ್ದೆ ಮುರಿಯಬೇಕಾಗುತ್ತೆ.
ಕೆ.ಆರ್ ನಗರ ಪ್ರದೇಶದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದೆ. ಐಪಿಸಿ ಸೆಕ್ಷನ್ 354(ಎ),(ಬಿ), (ಸಿ), 376(2), (ಕೆ), 201 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. 130ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಕೆಲವು ಮೂಲಗಳ ಪ್ರಕಾರ 10 ವರ್ಷ ಶಿಕ್ಷೆ ನೀಡಬಹುದು ಅಥವ ಜೀವಾವಧಿ ಶಿಕ್ಷೆ ನೀಡಬಹುದು ಎನ್ನಲಾಗುತ್ತಿದೆ. ಈ ಸಂಬಂಧ ಎರಡು ಕಡೆ ವಕೀಲರನ್ನು ಕೇಳಲಾಗುತ್ತೆ. ಹೀಗಾಗಿ ಶಿಕ್ಷೆ ಶನಿವಾರ ಪ್ರಕಟವಾಗಲಿದೆ. ಇದನ್ನು ಪ್ರಶ್ನಿಸಿ ಅಪರಾಧಿ ಹೈಕೋರ್ಟ್ ಗೆ ಹೋಗುವ ಸಾಧ್ಯತೆಯಿದೆ.