ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಾಸನ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹೈಕೋರ್ಟ್ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ. ಈ ಮೂಲಕ ನಾಲ್ಕೂ ಪ್ರಕರಣಗಳಲ್ಲಿ ಸಲ್ಲಿಸಿದ ಜಾಮೀನು ಅರ್ಜಿಗಳು ವಜಾಗೊಂಡಿವೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಗಳು ವಜಾಗೊಂಡಿವೆ.
ಅತ್ಯಾಚಾರ, ಅಶ್ಲೀಲ ವಿಡಿಯೋ, ಬೆದರಿಕೆ ಸೇರಿದಂತೆ 4 ಪ್ರಕರಣಗಳು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿವೆ. 4ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯಪೀಠ ಅರ್ಜಿ ವಜಾಗೊಳಿಸಿದೆ. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆಗೆ ಗನ್ ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ, ವಿಡಿಯೋ ಮಾಡಿಕೊಂಡ ಸೇರಿ ಹಲವು ಪ್ರಕರಣಗಳು ಇದರಲ್ಲಿ ದಾಖಲಾಗಿವೆ. 3 ತಿಂಗಳಿಗೂ ಅಧಿಕ ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ.