ಪ್ರಜಾಸ್ತ್ರ ಸುದ್ದಿ
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ-20 ಕ್ರಿಕೆಟ್ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಸರಣಿ ಪ್ರಾರಂಭವಾಗುವ ಹೊತ್ತಿನಲ್ಲಿಯೇ ವಿದಾಯ ಹೇಳಿದ್ದಾರೆ. 35 ವರ್ಷದ ಆಟಗಾರನಿಗೆ ಬುಧವಾರದಿಂದ ಶುರುವಾಗುವ ಟೂರ್ನಿಯಲ್ಲಿ ಅವಕಾಶ ನೀಡಿಲ್ಲ.
93 ಟಿ-20 ಪಂದ್ಯಗಳನ್ನು ಆಡಿದ್ದು, 2,575 ರನ್ ಗಳಿಸಿದ್ದಾರೆ. ಇದರಲ್ಲಿ 18 ಅರ್ಧ ಶತಕಗಳಿವೆ. 95 ಗರಿಷ್ಠ ರನ್ ಆಗಿದೆ. ವೆಸ್ಟ್ ಇಂಡೀಸ್ ವಿರುದ್ಧ 3 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದ್ದು, ಅದಕ್ಕೆ ಗಮನ ಹರಿಸಲು ಏಕದಿನ ಪಂದ್ಯಗಳ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ.




