ಪ್ರಜಾಸ್ತ್ರ ಸುದ್ದಿ
ಸಾಗರ(Sagara): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸ್ಪೀಕರ್ ಕಾಗೋಡು ತಮ್ಮಪ್ಪ ಅವರು, ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನಲೆಯಲ್ಲಿ, ದೇವಿಯ ದರ್ಶನ ಪಡೆಯಲು ಬಂದಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲಿನಿಂದಲೂ ಮಧುಮೇಹ ಸಮಸ್ಯೆಯಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆಯಂತೆ.




