ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ಖೋಟಾನೋಟು ತಯಾರು ಮಾಡುತ್ತಿದ್ದ ಜಾಲವೊಂದನ್ನು ಪಶ್ಚಿಮ ಠಾಣೆ ಪೊಲೀಸರು ಭೇದಿಸಿದ್ದಾರೆ. ಇದರಲ್ಲಿ ತೊಡಗಿಸಿಕೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾನೋಟು, ಇದರ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಟೇಬಲ್ ಮರಿಲಿಂಗ, ರಮೇಶ ಆದಿ, ಶಿವಲಿಂಗ ಎನ್ನುವರು ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ತನಿಖೆ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.