ಪ್ರಜಾಸ್ತ್ರ ಸುದ್ದಿ
ಮುರುಡೇಶ್ವರ(Murudeshwar): ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಹಾಗೂ 8 ಶಿಕ್ಷಕರು ಸೇರಿ 54 ಜನರು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು. ಮಂಗಳವಾರ ಸಂಜೆ 7 ವಿದ್ಯಾರ್ಥಿನಿಯರು ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿದ್ದಾರೆ. ಆಗ ಮೂವರನ್ನು ರಕ್ಷಿಸಲಾಗಿದೆ. ನಾಲ್ವರು ಸಮುದ್ರ ಪಾಲಾಗಿದ್ದಾರೆ. ನಂತರ ಓರ್ವ ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ. ಇನ್ನು ಮೂವರ ಶೋಧಕಾರ್ಯ ನಡೆದಿದೆ. ಮೂವರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆ ಸಂಬಂಧ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಇನ್ನು ಮೃತರ ಕುಟುಂಬಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗೋಪಾಲಕೃಷ್ಣ ಎಂಬುವರ ಮಗಳು ಶ್ರಾವಂತಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ 9ನೇ ತರಗತಿ ಓದುತ್ತಿದ್ದಳು. ಎನ್.ಗಡ್ಡೂರು ಗ್ರಾಮದ ಜೈರಾಮಪ್ಪ ಎಂಬುವರ ಪುತ್ರಿ ದೀಕ್ಷಾ, ಹಬ್ಬಣ್ಣಿ ಗ್ರಾಮದ ಚನ್ನರೆಡ್ಡಪ್ಪ ಎಂಬುವರ ಪುತ್ರಿ ಲಾವಣ್ಯ ಹಾಗೂ ದೊಡ್ಡಗಟ್ಟಿಹಳ್ಳಿಯ ಮುನಿರಾಜು ಅವರ ಮಗಳು ವಂದನಾ ಕಾಣೆಯಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.