Ad imageAd image

ಕಾರಿಗೆ ಲಾರಿ ಡಿಕ್ಕಿ, ನಾಲ್ವರ ಸಾವು

Nagesh Talawar
ಕಾರಿಗೆ ಲಾರಿ ಡಿಕ್ಕಿ, ನಾಲ್ವರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕುಣಿಗಲ್(Kunigal): ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಜಿಗಣಿಪಾಳ್ಯ ಹತ್ತಿರದ ರಾಷ್ಟ್ರೀಯ ಹೆದ್ದಾರಿ 33ರಲ್ಲಿ ನಡೆದಿದೆ. ಕುಮಾರ ನರಸಿಂಹಸ್ವಾಮಿ(65), ಇವರ ಪತ್ನಿ ಗಾಯತ್ರಿ(63) ಸೇರಿ ಇನ್ನಿಬ್ಬರು ಮೃತಪಟ್ಟಿದ್ದಾರೆ. ಇವರ ಮಂಡ್ಯದವರೆಂದು ಹೇಳಲಾಗುತ್ತಿದೆ.

ತುಮಕೂರು ಮಾರ್ಗದಿಂದ ಹೊರಟಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಿಂದಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಿಂದ ಮೃತದೇಹ ತೆಗೆಯಲು ಪೊಲೀಸರು ಸಾಕಷ್ಟು ಹರಸಾಹಸ ಪಡಬೇಕಾಯಿತು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article