ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಸಿಲಿಕಾನ್ ಸಿಟಿಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ರಾಜಾನುಕುಂಟೆ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.