ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ಬಾವಿಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಮಲ್ಲಿಗೆವಾಡ ಗ್ರಾಮದಲ್ಲಿ ನಡೆದಿದೆ. ಇವರೆಲ್ಲ ಹೇಗೆ ಬಾವಿಗೆ ಬಿದ್ದರು, ಘಟನೆ ನಡೆದಿದ್ದು ಯಾವ ರೀತಿ ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ವಿಠ್ಠಲ ಶಿಂಧೆ(75), ಇವರ ಪುತ್ರ ನಾರಾಯಣ(38), ಮೊಮ್ಮಕ್ಕಳಾದ ಶಿವರಾಜ(12) ಹಾಗೂ ಶ್ರೀನಿಧಿ(10) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.




