ಪ್ರಜಾಸ್ತ್ರ ಸುದ್ದಿ (Photo Credit: X/@ANI)
ಅಹಮದಾಬಾದ್(Ahmedbad): ನಿಷೇಧಿತ ಉಗ್ರ ಸಂಘಟನೆಯಾದ ಅಲ್ ಖೈದಾ ಜೊತೆಗೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದವರು ಬುಧವಾರ ಬಂಧಿಸಿದ್ದಾರೆ. ಅಲ್ ಖೈದಾ ಜೊತೆಗೆ ನಿರಂತರ ಸಂಪರ್ಕ ಹೊಂದಿದವರನ್ನು ಬಂಧಿಸಿದ್ದೇವೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2023ರಲ್ಲಿ ಅಲ್ ಖೈದಾ ಭಯೋತ್ಪಾದನಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಮೇ 20, 2024ರಲ್ಲಿ ಇಲ್ಲಿನ ಸರದಾರ್ ವಲ್ಲಾಭಾಯ್ ಪಟೇಲ್ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಇದೀಗ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.