ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ವಿಶ್ವೇಶ್ವರ ನಗರದಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಸ್ಥಳೀಯ ನಿವಾಸಿಗಳು ಶಾಕ್ ಆಗಿದ್ದಾರೆ. ಚೇತನ್ ಎಂಬಾತ ಪತ್ನಿ ರೂಪಾಲಿ, ಮಗ ಕುಶಾಲ್ ಹಾಗೂ ತಾಯಿ ಪ್ರಿಯಂವಧಾ ಎಂಬುವರಿಗೆ ವಿಷ ನೀಡಿದ್ದಾನೆ. ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಹೀಗೆ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ನಿಗೂಢವಾಗಿದೆ. ಯಾವ ಕಾರಣಕ್ಕೆ ಈ ರೀತಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಏನಾದರೂ ಡೆತ್ ನೋಟ್ ಬರೆದಿಟ್ಟಿದ್ದಾರಾ, ಕೌಟುಂಬಿಕ ಕಾರಣನಾ ಅಥವ ಬೇರೆ ಇನ್ನು ಏನಾದರೂ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರಾ ಏನು ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಈ ಕುರಿತು ವಿದ್ಯಾರಣ್ಯಪುರಂ ರಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.