ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಿಂದ ವಿಧಾನ ಪರಿಷತ್ತಿಗೆ ನೇಮಕವಾದ ನಾಲ್ವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಮೇಶ್ ಬಾಬು, ಕೆ.ಶಿವಕುಮಾರ್, ಆರತಿ ಕೃಷ್ಣ, ಎಫ್.ಎಚ್ ಜಕ್ಕಪ್ಪನವರ್ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗಷ್ಟೇ ಇವರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡಲಾಗಿತ್ತು.
ಈ ವೇಳೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ ಸೇರಿದಂತೆ ಇತರೆ ಸಚಿವರು ಉಪಸ್ಥಿತರಿದ್ದರು.