ಉಚಿತ ವಿದ್ಯುತ್ ಗ್ಯಾರೆಂಟಿ: ಅಧಿಕಾರಿಗಳ ಜೊತೆ ಸಚಿವ ಜಾರ್ಜ್ ಸಭೆ

216

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚುನಾವಣೆಪೂರ್ವದಲ್ಲಿ ಕಾಂಗ್ರೆಸ್ ನೀಡಿದ 5 ಗ್ಯಾರೆಂಟಿಗಳಲ್ಲಿ 200 ಯುನಿಟ್ ಉಚಿತ ವಿದ್ಯುತ್ ಸಹ ಒಂದು. ಗೃಹಜ್ಯೋತಿ ಯೋಜನೆಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಅದು ಜಾರಿಗೆ ಬರಬೇಕಿದೆ. ಹೀಗಾಗಿ ಇಲಾಖೆ ಅಧಿಕಾರಿಗಳ ಜೊತೆ ಇಂಧನ ಸಚಿವ ಕೆ.ಜೆ ಜಾರ್ಜ್ ಸಭೆ ನಡೆಸಿದ್ದಾರೆ.

ಕೆ.ಆರ್ ಸರ್ಕಲ್ ಹತ್ತಿರ ಇರುವ ಬೆಳಕು ಭವನದಲ್ಲಿ ಬೆಸ್ಕಾಂ ಎಂ.ಡಿ ಮಹಾಂತೇಶ್ ಬೀಳಗಿ, ತಾಂತ್ರಿಕ ನಿರ್ದೇಶಕ ಹೆಚ್.ರಮೇಶ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದಾರೆ. ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುತ್ತಿದ್ದು, ಇದಾದ ಮೇಲೆ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
error: Content is protected !!