ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಮುಂಜಾನೆ 11.45ರ ಸುಮಾರಿಗೆ ನಿಗಮ್ ಬೋಧ್ ಘಾಟ್ ನಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿ ವಿಧಾನಗಳು ನಡೆಯಲಿವೆ. ಲುಟೆನ್ಸ್ ಪ್ರದೇಶದ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ನಿವಾಸದಲ್ಲಿ ಶುಕ್ರವಾರ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ರೇವತ್ ರೆಡ್ಡಿ, ಎಂ.ಕೆ ಸ್ಟಾಲಿನ್, ಸಿದ್ದರಾಮಯ್ಯ, ಚಂದ್ರಬಾಬು ನಾಯ್ಡು, ಅತಿಶಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.
ಎಐಸಿಸಿ ಕಚೇರಿಯಿಂದ ಮೆರವಣಿಗೆ ನಡೆಯಲಿದೆ. ದೇಶದಲ್ಲಿ 7 ದಿನಗಳ ಕಾಲ ಶೋಕಾಚರಣೆ ಇರುತ್ತೆದೆ. ಈ ವೇಳೆ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಯಮುನಾ ನದಿಯ ದಂಡೆಯ ರಾಜ್ ಘಟ್ ನಲ್ಲಿ ಸಿಂಗ್ ಸಮಾಧಿ ನಿರ್ಮಾಣಕ್ಕೆ ಪ್ರತ್ಯೇಕ ಸ್ಥಳ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ.