Ad imageAd image

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅವಕಾಶ ನೀಡಲ್ಲ: ಜಿ.ಪರಮೇಶ್ವರ್

ಮುಡಾ ಹಗರಣ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸಲು ಸಜ್ಜಾಗಿದ್ದು, ಇದಕ್ಕೆ ಸಮಯ ಸಹ ನಿಗದಿ ಮಾಡಲಾಗಿದೆ.

Nagesh Talawar
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅವಕಾಶ ನೀಡಲ್ಲ: ಜಿ.ಪರಮೇಶ್ವರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA) ಹಗರಣ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್(BJP-JDS) ಜಂಟಿಯಾಗಿ ಪಾದಯಾತ್ರೆ ನಡೆಸಲು ಸಜ್ಜಾಗಿದ್ದು, ಇದಕ್ಕೆ ಸಮಯ ಸಹ ನಿಗದಿ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್(G Parameshwar), ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಜನರಿಗೆ ತಪ್ಪು ಮಾಹಿತಿ ನೀಡಲು ಹೊರಟ್ಟಿದ್ದಾರೆ. ಇದರ ಉದ್ದೇಶ ಒಳ್ಳೆಯದಲ್ಲ. ಇದಕ್ಕೆ ಅವಕಾಶ ನೀಡಲ್ಲ ಎಂದಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಾದಯಾತ್ರೆ ಮಾಡಿದಾಗ ಒಳ್ಳೆಯ ಉದ್ದೇಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶ ಹೊಂದಿತ್ತು. ಆದರೆ, ಕಾನೂನು ಬಾಹಿರವಾಗಿ ನಡೆಯದೆ ಇರುವ ಪ್ರಕರಣವನ್ನು ಮುಂದಿಟ್ಟುಕೊಂಡು ಅನಗತ್ಯವಾಗಿ ಜನರಿಗೆ ತಪ್ಪು ಸಂದೇಶ ಕೊಡಲು ಹೊರಟಿದ್ದಾರೆ. ನಾಡಿನ ಜನರಿಗೆ ಇದರ ಸತ್ಯ ಗೊತ್ತಾಗಲಿದೆ. ಸಿದ್ದರಾಮಯ್ಯ(Siddaramaiah) ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ. ಇನ್ನು ವಾಲ್ಮೀಕಿ(Valmiki nigama) ನಿಗಮದಲ್ಲಿ ನಡೆದ ಅಕ್ರಮವನ್ನು ಸಮರ್ಥಿಸಿಕೊಳ್ಳುತ್ತಿಲ್ಲ. ಸರಿಯಾದ ರೀತಿಯಲ್ಲಿ ತನಿಖೆ ನಡೆಯಲು ನ್ಯಾಯಾಧೀಶರ ನೇತೃತ್ವದಲ್ಲಿ ಸಿಎಂ ಸಮಿತಿಯೊಂದನ್ನು ರಚಿಸಿದ್ದಾರೆ. ಅದರ ವರದಿ ಬಂದ ಬಳಿಕ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಅಂತಾ ಹೇಳಿದರು.

WhatsApp Group Join Now
Telegram Group Join Now
Share This Article