ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಜೆಪಿ ಅಧಿಕಾರದಲ್ಲಿ ಇದ್ದಾಗ ನಡೆದ ಹಗರಣಗಳ(Scam) ಪ್ರಕರಣಗಳನ್ನು ಗುರುತಿಸಿದ್ದೇವೆ. ಅವುಗಳೆಲ್ಲರ ತನಿಖೆ ಯಾವ ಹಂತದಲ್ಲಿದೆ ಎನ್ನುವುದನ್ನು ಪರಿಶೀಲಿಸುತ್ತೇವೆ. ಈ ಸಂಬಂಧ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ, ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಬುಧವಾರ ಹೇಳಿದ್ದಾರೆ. ಬಿಜೆಪಿ(BJP) ಆಡಳಿತ ಕಾಲದ ವಿವಿಧ ಹಗರಣಗಳನ್ನು ವಿವಿಧ ಸಂಸ್ಥೆಗಳು ನಡೆಸುತ್ತಿವೆ.
ತನಿಖೆಯು ವೇಗವಾಗಿ ನಡೆಯಬೇಕೆಂದು ಸಮಿತಿ ರಚಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಬಾಕಿಯಿರುವ ಪ್ರಕರಣಗಳ ಬಗ್ಗೆ ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಹೇಳಿದ್ದೇನೆ. ವಾರದೊಳಗೆ ಸಮಿತಿ ಸಭೆ ನಡೆಸಿ ಸಚಿವ ಸಂಪುಟದ ಮುಂದೆ ಇಡುತ್ತೇನೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ನಮ್ಮ ಹೇಳಿಕೆ ಮುಖ್ಯವಲ್ಲ. ತನಿಖೆಯಲ್ಲಿ ಸಿಕ್ಕ ಸಾಕ್ಷಿಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತೆ. ಇಡಿ(ED)ಯವರು ನಾಗೇಂದ್ರ ಪಾತ್ರವಿದೆ ಎನ್ನುತ್ತಿದ್ದಾರೆ. ಸತ್ಯಾಸತ್ಯತೆ ತಿಳಿಯಲಿದೆ ಎಂದರು.